ಭೋಪಾಲ್ (ಮಧ್ಯಪ್ರದೇಶ): ಚಳಿಗಾಲದ ವಿಧಾನಸಭೆ ಅಧಿವೇಶನಕ್ಕೆ ಕೇವಲ ಒಂದು ದಿನ ಮುಂಚಿತವಾಗಿ ಮಧ್ಯಪ್ರದೇಶದ ಅಸೆಂಬ್ಲಿಯ ಐದು ಶಾಸಕರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ವರದಿಗಳ ಪ್ರಕಾರ, ಶನಿವಾರ ಮೂವರು ಶಾಸಕರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇನ್ನಿಬ್ಬರು ಶಾಸಕರಿಗೆ ಭಾನುವಾರ ಸೋಂಕು ದೃಢಪಟ್ಟಿದೆ.
ಮಧ್ಯಪ್ರದೇಶ ಅಸೆಂಬ್ಲಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳನ್ನು ಸಹ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ ಸುಮಾರು 45 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.