ಭೋಪಾಲ್: ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನ ಜೂನ್ 11 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ಉತ್ತರಪ್ರದೇಶ ಬಿಜೆಪಿ ಹಿರಿಯ ನಾಯಕರಾಗಿದ್ದ ಲಾಲ್ಜಿ ಟಂಡನ್ ಅವರನ್ನ ಮಧ್ಯಪ್ರದೇಶ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಟಂಡನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ರಾಜ್ಯಪಾಲರಾಗಿರುವ ಆನಂದಿಬೇನ್ ಪಟೇಲ್ ಅವರಿಗೆ ಮಧ್ಯಪ್ರದೇಶದ ಹೆಚ್ಚುವರಿ ಹೊಣೆ ನೀಡಲಾಗಿತ್ತು.