ಅಕೋಲಾ: ಮಹಾರಾಷ್ಟ್ರದಲ್ಲಿ ಕೆಲಸ ಮಾಡ್ತಿದ್ದ ಅಸ್ಸೋಂ ಮೂಲದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಕೊರೊನಾ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
30 ವರ್ಷದ ಕೂಲಿ ಕಾರ್ಮಿಕ ಮಹಾರಾಷ್ಟ್ರದ ಅಕೋಲಾದಲ್ಲಿ ಕೆಲಸ ಮಾಡುತ್ತಿದ್ದನು. ಈತನಿಗೆ ಕೋವಿಡ್-19 ಕಾಣಿಸಿಕೊಂಡಿದ್ದರಿಂದ ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವ್ಯಕ್ತಿ ಗಂಟಲು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಅಸ್ಸೋಂನ ನಾಗೋನ್ ಪ್ರದೇಶದ ವ್ಯಕ್ತಿ ಕೆಲಸ ಮಾಡಲು ಇಲ್ಲಿಗೆ ಆಗಮಿಸಿದ್ದನು. ಆದರೆ ಏಪ್ರಿಲ್ 7ರಂದು ಕೊರೊನಾ ವೈರಸ್ ಇರುವುದು ಪತ್ತೆಯಾಗಿತ್ತು. ಶನಿವಾರ ಸಂಜೆ 5 ಗಂಟೆಗೆ ಬಾತ್ರೂಂನೊಳಗೆ ಹೋಗಿದ್ದ ಈ ವ್ಯಕ್ತಿ ಗಂಟಲು ಕೊಯ್ದುಕೊಂಡಿದ್ದಾನೆ. ಈತನಿಗೆ ಚಿಕಿತ್ಸೆ ನೀಡಿದ್ರೂ ಪ್ರಯೋಜನವಾಗದೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.