ಥಾಣೆ (ಮಹಾರಾಷ್ಟ್ರ): ಭಯಂದರ್ ಟೌನ್ ಮಹಿಳಾ ಕಾರ್ಪೋರೇಟರ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ನರೇಂದ್ರ ಮೆಹ್ತಾ ಸೇರಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ ಸಂಜಯ್ ಟಾರ್ಕರ್ ಮತ್ತು ನರೇಂದ್ರ ಮೆಹ್ತಾ ವಿರುದ್ಧ ಜಿಲ್ಲಾ ಗ್ರಾಮೀಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮೀರಾ-ಭಯಂದರ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪರಾರಿಯಾಗಿದ್ದು ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೆಹ್ತಾ ಅವರಿಂದ ಕಿರುಕುಳ ಮತ್ತು ನಿಂದನೆ ಅನುಭವಿಸಿದ್ದಾಗಿ ಮಹಿಳಾ ಕಾರ್ಪೋರೇಟರ್ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1999 ರಿಂದ ನಮ್ಮ ಕುಟುಂಬಕ್ಕೆ ಮಾಜಿ ಶಾಸಕ ಬೆದರಿಕೆ ಹಾಕುತ್ತಿದ್ದ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಮೆಹ್ತಾ ಮತ್ತು ತಾರ್ಕಾರ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಮತ್ತು ಭಾರತೀಯ ದಂಡ ಸಂಹಿತೆ ಮತ್ತು 1989 ರ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಕಾಯ್ದೆ (ದೌರ್ಜನ್ಯ ತಡೆ) ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.