ETV Bharat / bharat

ಥಾಣೆಯ ಲೇಡಿ ಪೊಲೀಸ್​ ಮೇಲೆ ಹಲ್ಲೆ ಮಾಡಿದ ಪುಂಡನ ವಿರುದ್ಧ ಕೇಸ್​ - thane

ಬಂದೋಬಸ್ತ್​ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಆರೋಪದಲ್ಲಿ ಕಿಡಿಗೇಡಿಯೊಬ್ಬನ ವಿರುದ್ಧ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lockdown duty
ಥಾಣೆಯ ಲೇಡಿ ಪೊಲೀಸ್​ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ವಿರುದ್ಧ ಕೇಸು ದಾಖಲು
author img

By

Published : Apr 17, 2020, 12:51 PM IST

ಥಾಣೆ (ಮಹಾರಾಷ್ಟ್ರ): ದೇಶವ್ಯಾಪಿ ಲಾಕ್​ಡೌನ್​ ಹಿನ್ನೆಲೆಯಲ್ಲಿ ಬಂದೋಬಸ್ತ್​ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಲ್ಲಿ ಪುಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಥಾಣೆಯ ಕಲ್ಯಾಣ್​ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ನಿಶಾಂತ್ ದೇಶಮುಖ್ ಎಂಬಾತ ಹಲ್ಲೆ ನಡೆಸಿದ್ದ. ಆರೋಪಿ ನಿಶಾಂತ್​ ವೇಗವಾಗಿ ಕಾರು ಚಲಾಯಿಸುವುದನ್ನು ಕಂಡ ಮಹಿಳಾ ಪೊಲೀಸ್​ ಸಿಬ್ಬಂದಿ ಆತನನ್ನು ತಡೆದಿದ್ದರು. ಈ ವೇಳೆ ಆರೋಪಿ ಪೊಲೀಸ್​ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾನೆ.

ಸದ್ಯ ಆರೋಪಿ ವಿರುದ್ಧ ಸೆಕ್ಷನ್​ 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ) ಮತ್ತು ಭಾರತೀಯ ದಂಡ ಸಂಹಿತೆಯ ಕೆಲ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಈವರೆಗೆ ಕಿಡಿಗೇಡಿಯ ಬಂಧನವಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.