ETV Bharat / bharat

ಬಿಹಾರ ಚುನಾವಣೆ: ಎಡಪಕ್ಷಗಳೊಂದಿಗೆ ಮೈತ್ರಿಗೆ ಮಹಾಘಟಬಂಧನ್‌ ಒಲವು

ಇದೇ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾಮೈತ್ರಿಯ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸಿಎಂ ನಿತೀಶ್‌ ಕುಮಾರ್‌ ಪಕ್ಷವನ್ನು ಸೋಲಿಸಲು ರಣತಂತ್ರ ರೂಪಿಸುತ್ತಿದೆ ಎನ್ನಲಾಗುತ್ತಿದೆ.

mahagathbandhan-prioritising-alliance-with-left-parties-for-bihar-assembly-polls
ಬಿಹಾರ ಚುನಾವಣೆ: ಎಡಪಕ್ಷಗಳೊಂದಿಗೆ ಮೈತ್ರಿಗೆ ಮಹಾಘಟಬಂಧನ್‌ ಒಲವು
author img

By

Published : Sep 8, 2020, 5:59 PM IST

ನವದೆಹಲಿ: ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು, ಬಿಜೆಪಿ ಮೈತ್ರಿಯನ್ನು ಶತಾಯಗತಾಯ ಸೋಲಿಸಬೇಕೆಂದು ವಿಪಕ್ಷಗಳಾದ ಆರ್‌ಜೆಡಿ, ಕಾಂಗ್ರೆಸ್‌ ಪಣತೊಟ್ಟಿವೆ. ಇದಕ್ಕಾಗಿ ಹಿಂದೆ ರೂಪಿಸಿಕೊಂಡಿದ್ದ ಮಹಾಮೈತ್ರಿ (ಮಹಾಘಟಬಂಧನ್) ಆರ್‌ಜೆಡಿ ಮತ್ತು ಕಾಂಗ್ರೆಸ್‌ ಎರಡ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಆದ್ಯತೆ ನೀಡಲಿವೆ ಎಂಬ ಮಾಹಿತಿ ಬಹಿರಂಗವಾಗಿದೆ.

ಇದೇ ವರ್ಷದ ನವೆಂಬರ್‌-ಡಿಸೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮಹಾಮೈತ್ರಿಯ ಹಿರಿಯ ನಾಯಕರೊಬ್ಬರು ಚುನಾವಣೆಗೆ ಕ್ಷೇತ್ರಗಳ ಹಂಚಿಕೆಯ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಎಡ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ ಹಲವು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಲಿದೆ ಎಂಬ ತಂತ್ರಗಾರಿಕೆಯನ್ನು ರೂಪಿಸಿದ್ದಾರೆ ಎನ್ನಲಾಗಿದೆ.

ಎಡಪಕ್ಷಗಳು ಮಹಾಘಟಬಂಧನ್‌ ಜೊತೆಗೆ ಕೈ ಜೋಡಿಸಿದರೆ ಹೆಚ್ಚಿನ ಕ್ಷೇತ್ರಗಳನ್ನು ಅವರಿಗೆ ನೀಡಲಾಗುತ್ತದೆ. ಬಿಹಾರದಲ್ಲಿನ ಕಳೆದ ವಿಧಾನಸಭೆ ಚುನಾವಣೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ‌ಎಡಪಕ್ಷಗಳಿಗೆ ಹೋಗಿರುವ ಮತಗಳು ಎನ್‌ಡಿಎಗೆ ಲಾಭವಾಗಿದೆ. ಹೀಗಾಗಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೆ ಮಹಾಮೈತ್ರಿಗೆ ಲಾಭವಾಗಲಿದೆ ಎಂದು ಹೆಸರು ಹೇಳಲು ಇಚ್ಚಿಸದ ನಾಯಕರೊಬ್ಬರು ಹೇಳಿದ್ದಾರೆ.

ಅತಿ ಶೀಘ್ರದಲ್ಲೇ ಸೀಟು ಹಂಚಿಕೆಯ ಪ್ರಕ್ರಿಯೆ ಆರಂಭವಾಗಲಿದೆ. ಆರ್‌ಜೆಡಿ ಸಂಸ್ಥಾಪಕ ಲಾಲೂ ಪ್ರಸಾದ್‌ ಯಾದವ್‌ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆರ್‌ಜೆಡಿ 130-140 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ 55-65 ಕ್ಷೇತ್ರಗಳನ್ನು ಪಡೆಯಲಿದೆ ಎನ್ನಲಾಗಿದೆ. ಕೊನೆ ಗಳಿಗೆಯಲ್ಲಿ ಎಡಪಕ್ಷಗಳು ಸೇರಿದಂತೆ ಸೀಟು ಹಂಚಿಕೆಯ ಪ್ರಮಾಣ ಬದಲಾದರೆ ಅಚ್ಚರಿ ಪಡಬೇಕಿಲ್ಲ.

ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರಸ್ತುತ ಜೆಡಿಯು, ಬಿಜೆಪಿ ನೇತೃತ್ವದ ಸರ್ಕಾರದ ಅವಧಿ ನವೆಂಬರ್‌ 29ಕ್ಕೆ ಮುಗಿಯಲಿದೆ. ಕೋವಿಡ್‌-19ನಿಂದಾಗಿ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸುವ ಸಂಬಂಧ ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.