ಲಖನೌ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ತೀವ್ರ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಬಂದಿದೆ. ಈ ನಡುವೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಆಸ್ಪತ್ರೆಗೆ ಭೇಟಿ ನೀಡಿ, ಅವರ ಯೋಗಕ್ಷೇಮದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಆಸ್ಪತ್ರೆಯ ನಿರ್ದೇಶಕ ರಾಕೇಶ್ ಕಪೂರ್ ಮಾತನಾಡಿ, ನಿನ್ನೆ ಅವರ ಡಯಾಲಿಸಿಸ್ ಪರೀಕ್ಷೆ ಮಾಡಲಾಯಿತು. ಅವರು ಗಂಭೀರ ಸ್ಥೀತಿಯಲ್ಲಿಯೇ ಮುಂದುವರಿದಿದ್ದಾರೆ. ಆದರೆ ಪ್ರಸ್ತುತ ಅವರು ವೆಂಟಿಲೇಟರ್‌ನಲ್ಲಿಲ್ಲ, ಮತ್ತೊಮ್ಮೆ ಅವರನ್ನು ಡಯಾಲಿಸಿಸ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಆಗಸ್ಟ್ ತಿಂಗಳಲ್ಲಿ ನೃತ್ಯ ಗೋಪಾಲ್ ದಾಸ್ಗೆ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.