ಪುಣೆ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ವೊಂದು ನಡುರೋಡಿನಲ್ಲೇ ಧಗಧಗನೇ ಹೊತ್ತಿ ಉರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಪ್ರಯಾಣಿಕರು ಅದೃಷ್ಠವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರದ ಪುಣೆಯಿಂದ ನಾಗ್ಪುರ್ಗೆ ತೆರಳುತ್ತಿದ್ದ ಖಾಸಗಿ ಬಸ್, ಪುಣೆ ಅಹ್ಮದ್ನಗರ ಹೆದ್ದಾರಿಯ ರಾಮವಾಡಿ ಆಕ್ಟ್ರೋಯ್ ನಾಕಾ ಬಳಿ ಏಕಾಏಕಿ ಹೊತ್ತಿ ಉರಿದಿದೆ. ಈ ವೇಳೆ ತಕ್ಷಣವೇ ಪ್ರಯಾಣಿಕರನ್ನು ಕಳೆಗಿಳಿಸಲಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಬಸ್ಗೆ ಸಂಪೂರ್ಣವಾಗಿ ಆವರಿಸಿಕೊಂಡಿದೆ.
ಈ ಬಸ್ನಲ್ಲಿ 29 ಪ್ರಯಾಣಿಕರು ತೆರಳುತ್ತಿದ್ದರು. ಬೆಂಕಿ ಹತ್ತಿದ್ದು ಗೊತ್ತಾಗುತ್ತಿದ್ದಂತೆ ಎಲ್ಲರೂ ಗಡಿಬಿಡಿಯಲ್ಲಿ ಕೆಳಗೆ ಇಳಿದಿದ್ದಾರೆ. ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.