ಮುಂಬೈ: 9 ಮತ್ತು 11ನೇ ತರಗತಿಯಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೊಂದು ಚಾನ್ಸ್ ನೀಡಿದ್ದು, ಮೌಖಿಕವಾಗಿ ಪರೀಕ್ಷೆ ನಡೆಸಿ, ಪಾಸ್ ಆಗಲು ಅವಕಾಶ ಒದಗಿಸಿದೆ.
ಕೊರೊನಾ ವೈರಸ್ ಹಾವಳಿ ಜೋರಾಗಿರುವ ಕಾರಣ ಮತ್ತೊಮ್ಮೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಆಗಸ್ಟ್ 7ರಂದು ಎರಡೂ ತರಗತಿಗಳ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಪರೀಕ್ಷೆಯಲ್ಲಿ ಭಾಗಿಯಾಗಬಹುದು.
ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗುವುದು ಎಂದು ತಿಳಿಸಿರುವ ಸರ್ಕಾರ, ಇದರಲ್ಲಿ ಪಾಸ್ ಆಗುವವರು ಮುಂದಿನ ತರಗತಿಗಳಿಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ ಎಂದಿದೆ.
2018ರಲ್ಲಿ ಫೇಲ್ ಆಗಿದ್ದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.