ETV Bharat / bharat

ಈ ವರ್ಷದ ಹುಟ್ಟುಹಬ್ಬ ಆಚರಿಸದಿರಲು ಮಹಾರಾಷ್ಟ್ರ ಸಿಎಂ ನಿರ್ಧಾರ

ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

Maharashtra CM
Maharashtra CM
author img

By

Published : Jul 23, 2020, 7:13 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹಾವಳಿ ಜೋರಾಗಿದೆ. ಪ್ರತಿದಿನ ಸಾವಿರಾರು ಹೊಸ ಹೊಸ ಕೋವಿಡ್​ ಕೇಸ್‌ಗಳು ಪತ್ತೆಯಾ​ಗುತ್ತಿವೆ. ಈಗಾಗಲೇ 3 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಕಾಣಿಸಿಕೊಂಡಿವೆ. ಹೀಗಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಈ ವರ್ಷದ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

  • CM announces that he won't celebrate his birthday this yr. He has appealed supporters and party workers to not put flexes, hoardings wishing him. He has appealed them to donate to CM relief fund, organise blood donation & Plasma donation camps instead: Maharashtra CMO (file pic) pic.twitter.com/VsjXx0TRQF

    — ANI (@ANI) July 23, 2020 " class="align-text-top noRightClick twitterSection" data=" ">

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ವರ್ಷ ತಾವು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಇದರ ಜೊತೆಗೆ ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಫ್ಲೆಕ್ಸ್​ ಹಾಗೂ ಬ್ಯಾನರ್​ ಹಾಕದಂತೆಯೂ ಮನವಿ ಮಾಡಿದ್ದಾರೆ.

ಇದೇ ವೇಳೆ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ತಿಳಿಸಿರುವ ಅವರು, ರಕ್ತ ಹಾಗೂ ಪ್ಲಾಸ್ಮ ದಾನ ಮಾಡಲು ಕ್ಯಾಂಪ್​​​ ಆಯೋಜನೆ ಮಾಡುವಂತೆ ಮನವಿ ಮಾಡಿದ್ದಾರೆ. ಜುಲೈ 27ರಂದು ಉದ್ಧವ್​ ಠಾಕ್ರೆ 60ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.