ETV Bharat / bharat

ಮಹಾರಾಷ್ಟ್ರದಲ್ಲಿ ಕೊರೊನಾ ರಣಕೇಕೆ; ಸೇನೆ ನಿಯೋಜನೆ ಬಗ್ಗೆ ಉದ್ಧವ್ ಠಾಕ್ರೆ​ ಹೇಳಿದ್ದೇನು? - ಮಹಾ ಸಿಎಂ ಉದ್ಧವ್​ ಸ್ಪಷ್ಟನೆ

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಕಾರಣ ಸೇನೆ ನಿಯೋಜನೆ ಮಾಡುತ್ತಾರೆ ಎಂಬ ಗೊಂದಲ ಸಂಬಂಧ ಇದೀಗ ಖುದ್ದಾಗಿ ಉದ್ಧವ್​ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ.

Maharashtra CM
Maharashtra CM
author img

By

Published : May 9, 2020, 9:48 AM IST

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನಕಳೆದಂತೆ ಹೆಚ್ಚಳವಾಗುತ್ತಿದೆ. ಇಲ್ಲಿಯವರೆಗೆ ವೈರಾಣು ಹರಡುವಿಕೆ​ ನಿಯಂತ್ರಣಕ್ಕೆ ಬಂದಿಲ್ಲ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಲೆ ನೋವು ಹೆಚ್ಚಿಸಿದೆ. ಈ ನಡುವೆ ರಾಜ್ಯದಲ್ಲಿ ಸೇನೆ ನಿಯೋಜನೆ ಮಾಡಲಾಗುವುದು ಎಂಬ ವದಂತಿ ಹಬ್ಬಿದ್ದು, ಸಿಎಂ ಉದ್ಧವ್​ ಠಾಕ್ರೆ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಸೇನೆ ನಿಯೋಜನೆ ಮಾಡುವ ಅವಶ್ಯಕತೆ ಇಲ್ಲ. ಇಂತಹ ಊಹಾಪೋಹದ ಸುದ್ದಿಗಳನ್ನು ನಂಬಬೇಡಿ. ಜನರಿಗೆ ಸೂಕ್ತ ರೀತಿಯಲ್ಲಿ ಮಾಹಿತಿ ನೀಡಿ ನಾವು ಈವರೆಗೆ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸಿದರೆ ಸಾಕು. ಯಾವುದೇ ಕಾರಣಕ್ಕೂ ಸೇನೆ ನಿಯೋಜನೆ ಮಾಡುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಾಗಿದ್ದಾರೆ. ಅವರು ಹಗಲು,ರಾತ್ರಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದರು.

'ತವರಿಗೆ ತೆರಳುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ '

ಔರಂಗಾಬಾದ್​​ನಲ್ಲಿ ನಡೆದ ರೈಲು ದುರ್ಘಟನೆ ಬಗ್ಗೆ ಮಾತನಾಡುತ್ತಾ, ಕಾರ್ಮಿಕರ ಸಾವು ನೋವುಂಟು ಮಾಡಿದೆ. ರಾಜ್ಯದಲ್ಲಿರುವ ವಲಸೆ ಕಾರ್ಮಿಕರು ಮುಂದಿನ ನಾಲ್ಕು ದಿನ ತಾಳ್ಮೆ ಹಾಗೂ ಸಂಯಮ ಕಾಪಾಡಿಕೊಳ್ಳಬೇಕು. ತವರು ರಾಜ್ಯಕ್ಕೆ ತೆರಳಲು ಬಯಸುವ ಎಲ್ಲರಿಗೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೋವಿಡ್‌ ಅಂಕಿ ಅಂಕಿಅಂಶ:

ದೇಶದಲ್ಲಿ ಇಲ್ಲಿಯವರೆಗೆ 56,342 ಸೋಂಕಿತ ಪ್ರಕರಣಗಳು ಕಾಣಿಸಿಕೊಂಡಿದೆ. ಅದರಲ್ಲಿ ಮಹಾರಾಷ್ಟ್ರದಲ್ಲೇ 17,974 ಕೋವಿಡ್​ ಪ್ರಕರಣ ಕಾಣಿಸಿಕೊಂಡಿದ್ದು, ಪ್ರತಿದಿನ ಸಾವಿರಾರು ಜನರು ಮಹಾರಾಷ್ಟ್ರದಲ್ಲಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 694 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.