ಹೈದರಾಬಾದ್: ದೇಶಾದ್ಯಂತ ಕೊರೊನಾ ಆರ್ಭಟ ಜೋರಾಗಿದ್ದು, ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಇದೀಗ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 23 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಸದ್ಯ ಮಹಾರಾಷ್ಟ್ರದಲ್ಲಿ 9,90,795 ಕೋವಿಡ್ ಪ್ರಕರಣಗಳಿದ್ದು, ಇಂದೇ 14,253 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 448 ಜನರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 28,282 ಆಗಿದೆ. ಇಲ್ಲಿಯವರೆಗೆ 7,00,715 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸದ್ಯ 2,61,432 ಸಕ್ರಿಯ ಪ್ರಕರಣಗಳಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉತ್ತರಪ್ರದೇಶದಲ್ಲೂ ಇಂದು 7,042 ಹೊಸ ಕೇಸ್ ಕಾಣಿಸಿಕೊಂಡಿದ್ದು, 94 ಜನರು ಸಾವನ್ನಪ್ಪಿದ್ದಾರೆ. ಜತೆಗೆ 4,605 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಸದ್ಯ ರಾಜ್ಯದಲ್ಲಿ 2,92,029 ಕೇಸ್ಗಳಿದ್ದು, ಇದರಲ್ಲಿ 2,21,506 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ 4,206 ಜನ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲೂ 4,308 ಕೇಸ್ ದಾಖಲಾಗಿವೆ.
ಕರ್ನಾಟಕದಲ್ಲಿ 9,217 ಕೇಸ್ ದಾಖಲಾಗಿದ್ದು, 129 ಜನರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ 10,175 ಕೇಸ್ ಕಾಣಿಸಿಕೊಂಡಿದ್ದು, ಇಲ್ಲಿಯವರೆಗೆ 4,702 ಜನರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ 3,349 ಜನರಲ್ಲಿಂದು ಸೋಂಕು ಕಾಣಿಸಿಕೊಂಡಿದೆ. ತಮಿಳುನಾಡಿನಲ್ಲಿ 5,528 ಕೇಸ್ ದಾಖಲಾಗಿವೆ.