ETV Bharat / bharat

ಮಹಾರಾಷ್ಟ್ರದಲ್ಲೂ ಜುಲೈ 31ರವರೆಗೆ ಲಾಕ್​ಡೌನ್​... ಕಳೆದ 24 ಗಂಟೆಯಲ್ಲೇ 77 ಪೊಲೀಸರಿಗೆ ಸೋಂಕು! - ಕೋವಿಡ್​ ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಜುಲೈ 31ರವರೆಗೆ ಲಾಕ್​ಡೌನ್​ ವಿಸ್ತರಣೆ ಮಾಡಿ ಆದೇಶ ಹೊರಹಾಕಲಾಗಿದೆ.

Maharashtra Government
Maharashtra Government
author img

By

Published : Jun 29, 2020, 4:09 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದ್ದು, ಏಳು ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

ಪ್ರತಿದಿನ ಸಾವಿರಾರು ಕೇಸ್​ಗಳು ಕಂಡು ಬರುತ್ತಿರುವ ಕಾರಣ ಇದೀಗ ಜುಲೈ 31ರವರೆಗೆ ಲಾಕ್​ಡೌನ್​ ವಿಸ್ತರಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಹಾಕಿದೆ. ಕೇವಲ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದ್ದು, ಉಳಿದಂತೆ ಎಲ್ಲವೂ ಬಂದ್​ ಆಗಿರಲಿದೆ ಎಂದು ತಿಳಿಸಿದೆ.

ಇದೇ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಕಡ್ಡಾಯವಾಗಿ ಬಳಸಿ ಎಂದು ಮನವಿ ಮಾಡಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲೇ 77 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದ, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ 1,030 ಪೊಲೀಸರಿಗೆ ಸೋಂಕು ತಗುಲಿದ್ದು, 59 ಪೊಲೀಸ್​ ಸಾವನ್ನಪ್ಪಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳ ಸೇರಿದಂತೆ ಅನೇಕ ರಾಜ್ಯಗಳು ಲಾಕ್​ಡೌನ್​ ವಿಸ್ತರಣೆ ಮಾಡಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.