ETV Bharat / bharat

ಮಹಾರಾಷ್ಟ್ರದಲ್ಲಿ ಫೆ. 28 ರವರೆಗೆ ಲಾಕ್​ಡೌನ್​ ವಿಸ್ತರಿಸಿ ಸರ್ಕಾರ ಆದೇಶ - Maharashtra government extends lockdown

ಕೊರೊನಾ ಮಹಾಮಾರಿ ನಿಯಂತ್ರಣಕ್ಕೆಂದು ಮಹಾರಾಷ್ಟ್ರದಲ್ಲಿ ಹೇರಲಾಗಿದ್ದ ಲಾಕ್​ಡೌನ್​ ಅನ್ನು ಫೆಬ್ರವರಿ 28 ರವೆಗೆ ವಿಸ್ತರಿಸಲಾಗಿದೆ.

Maharashtra government extends #lockdown till February 28
ಮಹಾರಾಷ್ಟ್ರದಲ್ಲಿ ಫೆ 28 ರವರೆಗೆ ಲಾಕ್​ಡೌನ್​ ವಿಸ್ತರಣೆ
author img

By

Published : Jan 29, 2021, 2:08 PM IST

ಮುಂಬೈ: ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಪ್ರಕಟಿಸಿದ್ದು, ಫೆಬ್ರವರಿ 28 ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು, ಇಡೀ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ಅನ್ನು ವಿಸ್ತರಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನೆಲೆ ಫೆಬ್ರವರಿ 28 ರವರೆಗೆ ಲಾಕ್​ಡೌನ್​ ವಿಸ್ತರಿಸಲಾಗುತ್ತಿದೆ ಅಂತಾ ಮಹಾರಾಷ್ಟ್ರ ರಾಜ್ಯಪಾಲರ ಪರವಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮಹಾರಾಷ್ಟ್ರ ಸರ್ಕಾರದ ಎಲ್ಲ ಇಲಾಖೆಗಳು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಅನುಮತಿ ನೀಡಿರುವ ಕಾರ್ಯಚಟುವಟಿಕೆಗಳು, ಕ್ಷೇತ್ರಗಳು ಎಂದಿನಂತೆ ಕಾರ್ಯನಿರ್ವಹಿಸಲು ಅನುಮತಿಯಿದೆ. ಕಾಲಕಾಲಕ್ಕೆ ಅಗತ್ಯ ಬದಲಾವಣೆಗಳನ್ನು ತರಲಾಗುತ್ತದೆ. ಹಿಂದಿನ ಆದೇಶಗಳನ್ನು ಈಗಿನ ಆದೇಶಗಳೊಂದಿಗೆ ಹೊಂದಿಸಿ ಫೆಬ್ರವರಿ 28 ರವರೆಗೆ ಲಾಕ್​ಡೌನ್​ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಮುಂಬೈ- ಅಹಮದಾಬಾದ್​​ ಹೈ ಸ್ಪೀಡ್ ರೈಲು ಕಾರಿಡಾರ್​​ : ಎಲ್​​ ಅಂಡ್​ ಟಿ ಜತೆ ಒಪ್ಪಂದ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.