ಮುಂಬೈ: ಮಹಾರಾಷ್ಟ್ರ ಸರ್ಕಾರ ಕೋವಿಡ್ -19 ಚಿಕಿತ್ಸಾ ಔಷಧಿಗಳನ್ನು ಕಡಿಮೆ ದರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀಡಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸಿದೆ.
ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರವು ಹೆಚ್ಚುವರಿಯಾಗಿ 500 ವೆಂಟಿಲೇಟರ್‌ಗಳನ್ನು ಒದಗಿಸಬೇಕೆಂದು ಹೇಳಿದ್ದಾರೆ.
ಐಸಿಎಂಆರ್ ಸಹಾಯದಿಂದ ಕೋವಿಡ್-19 ರೋಗಿಗಳಿಗೆ ಕೇಸ್-ಟು-ಕೇಸ್ ಆಧಾರದ ಮೇಲೆ ಚಿಕಿತ್ಸೆ ನೀಡಲು ನಾವು ರೆಮ್ಡೆಸಿವಿರ್ ಮತ್ತು ಟೊಸಿಲಿಜುಮಾಬ್ ಔಷಧಿಗಳನ್ನು ನೀಡುತ್ತಿದ್ದೇವೆ. ಆದರೆ ಈ ಔಷಧಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ರೋಗಿಗಳ ಚಿಕಿತ್ಸೆಗಾಗಿ ಸಮಂಜಸವಾದ ಬೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೀಡಬೇಕು ಎಂದಿದ್ದಾರೆ.
ಕೇಂದ್ರದಿಂದ ನಮಗೆ ಇರುವ ಮತ್ತೊಂದು ಬೇಡಿಕೆಯೆಂದರೆ, ರಾಜ್ಯದಾದ್ಯಂತ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿಯಾಗಿ 500 ವೆಂಟಿಲೇಟರ್‌ಗಳನ್ನು ಪೂರೈಸಬೇಕು ಎಂದಿದ್ದಾರೆ.