ಮುಂಬೈ: ಕೊರೊನಾ ವೈರಸ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ಲಾಕ್ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 4 ಲಕ್ಷದ ಗಡಿ ದಾಟಿದ್ದು, ಮುಂಜಾಗ್ರತಾ ಕ್ರಮವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಚಿತ್ರಮಂದಿರಗಳು, ಹೋಟೆಲ್, ರೆಸ್ಟೋರೆಂಟ್, ಮಾಲ್ ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ 5ರಿಂದ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಯಥಾಸ್ಥಿತಿ ಮುಂದುವರೆದಿದ್ದು, ಜನರ ಅನಗತ್ಯ ಓಡಾಡಕ್ಕೆ ಬ್ರೇಕ್ ಹಾಕಲಾಗಿದೆ. ಅಷ್ಟೆ ಅಲ್ಲದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಕಡ್ಡಾಯ ಎಂದು ಸರ್ಕಾರ ಸೂಚಿಸಿದೆ.