ETV Bharat / bharat

ಮಹಾರಾಷ್ಟ್ರಕ್ಕೆ ಬೇಕಾಗಿರೋದು ಸ್ಥಿರ ಸರ್ಕಾರ, 'ಕಿಚಡಿ' ಸರ್ಕಾರವಲ್ಲ: ದೇವೇಂದ್ರ ಫಡ್ನವೀಸ್ - ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಪ್ರತಿಕ್ರಿಯೆ

ಪ್ರಮಾಣವಚನದ ಬಳಿಕ ಮಹಾರಾಷ್ಟ್ರ ನೂತನ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ನೂತನ ಡಿಸಿಎಂ ಅಜಿತ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.

ದೇವೇಂದ್ರ ಫಡ್ನವೀಸ್
author img

By

Published : Nov 23, 2019, 10:33 AM IST

ಮಹಾರಾಷ್ಟ್ರ: ರಾತ್ರಿ ಬೆಳಗಾಗುವಷ್ಟರಲ್ಲಿ ಮಹಾರಾಷ್ಟ್ರ ರಾಜಕೀಯದಲ್ಲಿ ಊಹಿಸಲಾಗದ ಬೆಳವಣಿಗೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಎನ್‌ಸಿಪಿಯ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇನ್ನು ಪ್ರಮಾಣವಚನ ಸ್ವೀಕರಿಸಿ ಪ್ರತಿಕ್ರಿಯೆ ನೀಡಿರುವ ನೂತನ ಸಿಎಂ ದೇವೇಂದ್ರ ಫಡ್ನವೀಸ್, ಚುನಾವಣೆಯಲ್ಲಿ ಜನರು ನಮಗೆ ಸ್ಪಷ್ಟ ಜನಾದೇಶ ಆದೇಶವನ್ನು ನೀಡಿದ್ದರು, ಆದರೆ ಫಲಿತಾಂಶಗಳ ನಂತರ ಶಿವಸೇನೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸಿತು. ಇದರ ಪರಿಣಾಮವಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು. ಮಹಾರಾಷ್ಟ್ರಕ್ಕೆ ಬೇಕಾಗಿರೋದು ಸ್ಥಿರ ಸರ್ಕಾರವೇ ಹೊರತು 'ಕಿಚಡಿ' ಸರ್ಕಾರವಲ್ಲ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಎನ್‌ಸಿಪಿಯ ಅಜಿತ್ ಪವಾರ್​ಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

  • Devendra Fadnavis after taking oath as Maharashtra CM again: People had given us a clear mandate, but Shiv Sena tried to ally with other parties after results, as a result President's rule was imposed. Maharashtra needed a stable govt not a 'khichdi' govt. pic.twitter.com/6Zmf9J9qKc

    — ANI (@ANI) November 23, 2019 " class="align-text-top noRightClick twitterSection" data=" ">

ಅಲ್ಲದೇ ನನ್ನನ್ನು ಮತ್ತೊಮ್ಮೆ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ ಎಂದು ಫಡ್ನವೀಸ್ ಹೇಳಿದರು.

  • Ajit Pawar after taking oath as Deputy CM: From result day to this day no party was able to form Govt, Maharashtra was facing many problems including farmer issues, so we decided to form a stable Govt pic.twitter.com/GucfUVBCnm

ಫಲಿತಾಂಶದ ದಿನದಿಂದ ಇಂದಿನವರೆಗೆ ಯಾವುದೇ ಪಕ್ಷಕ್ಕೆ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ರೈತರ ಸಮಸ್ಯೆಗಳು ಸೇರಿದಂತೆ ಮಹಾರಾಷ್ಟ್ರ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹೀಗಾಗಿ ನಾವು ಸ್ಥಿರ ಸರ್ಕಾರವನ್ನು ರಚಿಸಲು ನಿರ್ಧರಿಸಿದೆವು ಎಂದು ನೂತನ ಡಿಸಿಎಂ ಅಜಿತ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.

Intro:Body:

nat

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.