ETV Bharat / bharat

ಇಂದು 7,074 ಹೊಸ ಕೇಸ್ ಪತ್ತೆ​, 295 ಸಾವು: ಮಹಾರಾಷ್ಟ್ರದಲ್ಲಿ 2 ಲಕ್ಷದ ಗಡಿ ದಾಟಿದ ಕೊರೊನಾ!

ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಇಂದು ಒಂದೇ ದಿನ ಬರೋಬ್ಬರಿ 7 ಸಾವಿರಕ್ಕೂ ಅಧಿಕ ಕೋವಿಡ್​ ಪ್ರಕರಣ ಕಾಣಿಸಿಕೊಂಡಿವೆ.

Maharashtra
Maharashtra
author img

By

Published : Jul 4, 2020, 10:04 PM IST

ಮುಂಬೈ: ದೇಶಾದ್ಯಂತ ಕೊರೊನಾ ಅಬ್ಬರ ಜೋರಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್​-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಹಾರಾಷ್ಟ್ರದಲ್ಲಿ ಇದರ ಅಬ್ಬರ ಮತ್ತಷ್ಟು ವೇಗ ಪಡೆದುಕೊಂಡಿದೆ.

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ದಾಖಲೆಯ 7,074 ಹೊಸ ಕೊರೊನಾ ಪ್ರಕರಣ ಕಾಣಿಸಿಕೊಂಡಿದ್ದು, 295 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ ಇದೀಗ 2,00,064 ಆಗಿದ್ದು, ಸಾವಿನ ಸಂಖ್ಯೆ 8,671ರ ಗಡಿ ದಾಟಿದೆ. ಸದ್ಯ ಮಹಾರಾಷ್ಟ್ರದಲ್ಲಿ 83,295 ಆ್ಯಕ್ಟೀವ್​ ಕೇಸ್​ಗಳಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜತೆಗೆ ಇಂದು 3,395 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೆ 10,80,975 ಕೋವಿಡ್​ ಟೆಸ್ಟ್​​ ನಡೆಸಲಾಗಿದೆ.

ಮುಂಬೈನಲ್ಲೇ ಇಂದು 1180 ಕೋವಿಡ್​ ಪ್ರಕರಣ ಕಾಣಿಸಿಕೊಂಡಿದ್ದು, 68 ಜನರು ಸಾವನ್ನಪ್ಪಿದ್ದಾರೆ. ಉಳಿದಂತೆ 1071 ಜನರು ಡಿಸ್ಚಾರ್ಜ್​​ ಆಗಿದ್ದಾರೆ. ಇದರ ಜತೆಗೆ ರಾಜ್ಯದಲ್ಲಿ 5,96,038 ಜನರಿಗೆ ಹೋಂ ಕ್ವಾರಂಟೈನ್​ ಮಾಡಲಾಗಿದ್ದು, 41,566 ಜನರನ್ನು ಸಾಂಸ್ಥಿಕ ಕ್ವಾರಂಟೈನ್​​ನಲ್ಲಿಡಲಾಗಿದೆ.

ತಮಿಳುನಾಡಿನಲ್ಲೂ ಕೊರೊನಾ ಅಬ್ಬರ ಜೋರಾಗಿದ್ದು, ಈಗಾಗಲೇ 1 ಲಕ್ಷ ಗಡಿ ದಾಟಿದೆ. ನವದೆಹಲಿಯಲ್ಲೂ 97,200 ಕೋವಿಡ್​ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.