ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ) : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಝದೂರಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.
ಝದೂರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆಯುತ್ತಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಅಲ್ಲದೆ ಓರ್ವನನ್ನು ಶೋಪಿಯಾನ್ ಜಿಲ್ಲೆಯ ಕಿಲೂರಾ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ.