ನವದೆಹಲಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ರಂಗಕ್ಕೆ ಕೆಲವೊಂದು ರಿಲೀಫ್ಗಳನ್ನು ಕೇಂದ್ರ ಕೃಷಿ ಸಚಿವಾಲಯ ಘೋಷಿಸಿದೆ. ಇದರಿಂದಾಗಿ ಕೃಷಿಕರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.
ಕೃಷಿ ವಲಯಕ್ಕೆ ಸಂಬಂಧಿಸಿದ ಟ್ರಕ್ಗಳಿಗೆ ಒಂದೆಡೆಯಿಂದ ಮತ್ತೊಂದೆಡೆ ಸರಕು ಮತ್ತು ಸೇವೆಗಳನ್ನು ಸಾಗಿಸಲು ಅನುಮತಿ ನೀಡಲಾಗಿದೆ. ಕೃಷಿಗೆ ರಾಸಾಯನಿಕ ಗೊಬ್ಬರ, ಬೀಜ ಪೂರೈಸುವ ಅಂಗಡಿಗಳು ಮಳಿಗೆಗಳು ಹಾಗೂ ಕೃಷಿ ಸಾಧನಗಳನ್ನು ಪೂರೈಸುವ ಮಳಿಗೆಗಳಿಗೆ ಕೆಲವು ನಿರ್ಬಂಧಗಳೊಂದಿಗೆ ತೆರೆಯಲು ಅನುಮತಿಸಲಾಗಿದೆ.
ಕೃಷಿ ಉತ್ಪನ್ನಗಳ ರಫ್ತಿಗೆ ಯಾವುದೇ ನಿಯಂತ್ರಣವಿಲ್ಲ. ಕಾಫಿ ಹಾಗೂ ಟೀ ತೋಟಗಳಲ್ಲಿ ಶೇ 50ರಷ್ಟು ಕಾರ್ಮಿಕರು ಮಾತ್ರ ಕಾರ್ಯನಿರ್ವಹಿಸಬೇಕು. ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕೇಂದ್ರ ಕೃಷಿ ಸಚಿವಾಲಯ ಸೂಚಿಸಿದೆ.