ಕೋಲ್ಕತ್ತಾ: ದೇಶದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಮುಖ್ಯಮಂತ್ರಿಗಳಿಂದ ಸಲಹೆಗಳನ್ನು ಪಡೆದು, ಕಾರ್ಯತಂತ್ರ ರೂಪಿಸುವ ಮೂಲಕ ಭವಿಷ್ಯದಲ್ಲಿ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಕ್ರಮಗಳನ್ನು ಕೈಗೊಳ್ಳಲೆಂದು ಪಿಎಂ ಮೋದಿ ಈ ಸಭೆ ಕರೆದಿದ್ದಾರೆ.
ಸಭೆ ಎರಡು ದಿನ ನಡೆಯಲಿದ್ದು, ಇದರಲ್ಲಿ 36 ರಾಜ್ಯಗಳ ಸಿಎಂಗಳು ಭಾಗವಹಿಸಬೇಕಿತ್ತು. ಆದರೆ ಈಗ ಕೇವಲ 13 ರಾಜ್ಯಗಳ ಸಿಎಂಗಳಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಗಿದೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗಿಯಾಗದಿರಲು ಇದು ಮುಖ್ಯ ಕಾರಣವಾಗಿರಬಹುದು ಎನ್ನಲಾಗಿದೆ.
ಇಂದು ಮಧ್ಯಾಹ್ನ ಮೋದಿ ಅವರು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ನಿರ್ವಾಹಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ನಾಳೆ ಸಹ ಈ ಸಭೆ ಮುಂದುವರೆಯಲಿದೆ.