ಕೊಲ್ಕತ್ತಾ (ಪಶ್ಚಿಮ ಬಂಗಾಳ) : ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ಭಾರಿ ಹೊರೆಯಾಗಿದೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿಯು ಆಲೂಗಡ್ಡೆ, ಈರುಳ್ಳಿಯಂತಹ ಅಗತ್ಯ ವಸ್ತುಗಳ ಸಂಗ್ರಹಣೆಗೆ ಪ್ರೇರೇಪಿಸುತ್ತವೆ. ಮಧ್ಯವರ್ತಿಗಳು ಅವುಗಳನ್ನು ಸಂಗ್ರಹಿಸಿಡುತ್ತಾರೆ. ಇದರಿಂದ ಮಾರುಕಟ್ಟೆಗೆ ಅಗತ್ಯವಸ್ತುಗಳ ಪೂರೈಕೆ ಕಡಿಮೆಯಾಗಿ, ಬೆಲೆ ಜಾಸ್ತಿಯಾಗುತ್ತದೆ. ದಲ್ಲಾಳಿಗಳ ಈ ನಡೆ ಗ್ರಾಹಕರಿಗೆ ತೊಂದರೆಯುಂಟು ಮಾಡುತ್ತಿದೆ.
ಶೀಘ್ರವೇ ಅಗತ್ಯವಸ್ತುಗಳ ಬೆಲೆಗಳ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮೋದಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.