ಕೋಲ್ಕತ್ತಾ: ಸಾಲ್ಟ್ ಲೇಕ್ ಸೆಕ್ಟರ್-ವಿ ಮತ್ತು ಸಾಲ್ಟ್ ಲೇಕ್ ಸ್ಟೇಡಿಯಂ ನಡುವಿನ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್‌ನ ಮೊದಲ ಹಂತದ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಸರು ಕಾಣೆಯಾಗಿದೆ.
-
West Bengal CM Mamata Banerjee's name missing from the invitation for the inauguration of Phase I of the East-West Metro corridor between Salt Lake Sector-V to Salt Lake Stadium. #WestBengal pic.twitter.com/FFWcXcaKqE
— ANI (@ANI) February 13, 2020 " class="align-text-top noRightClick twitterSection" data="
">West Bengal CM Mamata Banerjee's name missing from the invitation for the inauguration of Phase I of the East-West Metro corridor between Salt Lake Sector-V to Salt Lake Stadium. #WestBengal pic.twitter.com/FFWcXcaKqE
— ANI (@ANI) February 13, 2020West Bengal CM Mamata Banerjee's name missing from the invitation for the inauguration of Phase I of the East-West Metro corridor between Salt Lake Sector-V to Salt Lake Stadium. #WestBengal pic.twitter.com/FFWcXcaKqE
— ANI (@ANI) February 13, 2020
ಆಹ್ವಾನ ಪತ್ರಿಕೆಯಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಬಾಬುಲ್ ಸುಪ್ರಿಯೋ ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈ ಇಬ್ಬರು ಸಚಿವರಲ್ಲದೆ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ ಮತ್ತು ಲೋಕಸಭಾ ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ.
ಸಿಎಎ ಮತ್ತು ಎನ್‌ಆರ್‌ಸಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬ್ಯಾನರ್ಜಿ ಕೇಂದ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಹೀಗಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಎಎಂಎ ಮತ್ತು ಎನ್‌ಆರ್‌ಸಿ ವಿರುದ್ಧ ಟಿಎಂಸಿ ಮುಖ್ಯಸ್ಥರು ಮೆರವಣಿಗೆ ಮತ್ತು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಈ ಕಾಯ್ದೆಗಳನ್ನ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.