ಗ್ರೇಟರ್ ನೋಯ್ಡಾ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಕಾಮುಕನೋರ್ವನನ್ನು ಇಲ್ಲಿನ ಬೀಟಾ 2ನೇ ಠಾಣಾ ಪೊಲೀಸರು ಫೋಕ್ಸೊ ಕಾಯಿದೆಯಡಿ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಇದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಳ್ಳಿಯೊಂದರಲ್ಲಿ ಯುಕನೋರ್ವ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೆ. 2 ರಂದು ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ನಮ್ಮ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ವೃಂದಾ ಶುಕ್ಲಾ ತಿಳಿಸಿದ್ದಾರೆ. ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ನೀಡುವ (ಫೋಕ್ಸೊ) ಕಾಯ್ದೆ 376 ಮತ್ತು 3/4 ಅಡಿಯಲ್ಲಿ ದೂರು ದಾಖಲಾಗಿದೆ. ಬಂಧಿತ ಆರೋಪಿಯು ಬಾಲಕಿ ಒಬ್ಬಂಟಿಯಾಗಿ ಆಟವಾಡುತ್ತಿರುವುದನ್ನು ನೋಡಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ.