ETV Bharat / bharat

ಪ್ರೀತಿ ಮಾಡೋದೆ ತಪ್ಪಾ?: ಪ್ರೀತಿ ಮಾಡಿದವರಿಗೆ ಇದೇನಾ ಶಿಕ್ಷೆ ? - Man beaten to death over love affair

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬ ಸದಸ್ಯರಿಂದ ಥಳಿಸಲ್ಪಟ್ಟ ಯುವಕನೊಬ್ಬ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕನ ಕೊಲೆ
ಯುವಕನ ಕೊಲೆ
author img

By

Published : Sep 28, 2020, 11:18 PM IST

ಬಲ್ಲಿಯಾ (ಉತ್ತರಪ್ರದೇಶ): ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ರಾಕೇಶ್ (22) ಎಂಬ ಯುವಕ ಓರ್ವ ಹುಡುಗಿಯನ್ನು ಪ್ರೀತಿಸುತ್ತಿದ್ದ, ಈ ಹಿನ್ನೆಲೆ ಹುಡುಗಿಯ ಕುಟುಂಬಸ್ಥರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಹುಡುಗಿಯಿಂದ ದೂರ ಹೋಗುವಂತೆ ಸೂಚಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ದುಬೆ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ದುಬೆ

ರಾಕೇಶ್​ನನ್ನು ತಕ್ಷಣ ಗೋಪಾಲ್ಪುರದ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದ್ರೆ, ಆತನ ಸ್ಥಿತಿ ಗಂಭೀರವಾಗಿದ್ದ ಕಾರಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟ ಎಂದು ದುಬೆ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.