ಪಾಲ್ಘರ್: ಮಹಾರಾಷ್ಟ್ರದ ಫ್ಲಾಟ್‌ನಲ್ಲಿ 72 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಮೃತರನ್ನು ಜಯಪ್ರಕಾಶ್ ಫೋಂಡಾ ಎಂದು ಗುರುತಿಸಲಾಗಿದ್ದು, ಗುರುವಾರ ಅಥವಾ ಶುಕ್ರವಾರದ ಮಧ್ಯರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಯಚೂರಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ಶುಕ್ರವಾರ ಬೆಳಗ್ಗೆ ಫೋಂಡಾ ಅವರ ಮನೆಯ ಸಹಾಯಕರು ಫ್ಲಾಟ್‌ಗೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಕೊಲೆಗಾರರನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದು, ಅಪರಾಧದ ಹಿಂದಿನ ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ.