ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸುದ್ದಿಗಳನ್ನು ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯು ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರನ್ನು ದೂಷಿಸಿ, ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಅಪ್‌ಲೋಡ್ ಮಾಡುತ್ತಿದ್ದ. ಆ ವಿಡಿಯೋಗಳು ಸರ್ಕಾರ ಮತ್ತು ಮುಂಬೈ ನಗರ ಪೊಲೀಸರ ಚಿತ್ರಣವನ್ನು ಹಾನಿಗೊಳಿಸುವಂತೆ ಇದ್ದಿದ್ದರಿಂದ, ಆತನನ್ನು ಬಂಧಿಸಲಾಗಿದೆ.