ಪಾಲ್ಘರ್ (ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯ ಮೋಖಡಾ ಪ್ರದೇಶದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿರುವ 30 ವರ್ಷದ ಯುವಕ ತಾಲಿಯಾಚಿವಾಡಿ ಪ್ರದೇಶದಲ್ಲಿರುವ ಸಂತ್ರಸ್ತೆಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
"ಸಂತ್ರಸ್ತೆಯ ಸಹೋದರ ಭೋಯಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಅಕ್ಕಪಕ್ಕದವರನ್ನು ಕೂಗಿದ್ದಾನೆ. ಆದರೆ ಆರೋಪಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. ಕುಟುಂಬ ಸದಸ್ಯರು ದೂರು ದಾಖಲಿಸಿದ ನಂತರ ಗುರುವಾರ ತಡರಾತ್ರಿ ಆರೋಪಿಯನ್ನು ಬಂಧಿಸಲಾಯಿತು" ಎಂದು ಮೊಖಡಾ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಆತನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.