ಔರಂಗಾಬಾದ್(ಮಹಾರಾಷ್ಟ್ರ): ಮಹಿಳೆಯ ಮನೆಗೆ ನುಗ್ಗಿರುವ ವ್ಯಕ್ತಿಯೊಬ್ಬ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರ ಬಂಧಿಯಾಗಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದಿದೆ.
ಸಿಲೊಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 40 ವರ್ಷದ ಸಂತೋಷ ಮೊಹ್ತೆ ಈ ಕೃತ್ಯ ವೆಸಗಿರುವ ಆರೋಪಿ. ಸೋಮವಾರ ರಾತ್ರಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿರುವ ದುಷ್ಕರ್ಮಿ ಏಕಾಏಕಿ ಆಕೆಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಶೇ.95ರಷ್ಟು ಸುಟ್ಟಿರುವ ಮಹಿಳೆ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿದ್ದಾಳೆ.
ಯಾವ ಕಾರಣಕ್ಕಾಗಿ ಮಹಿಳೆಗೆ ಈ ವ್ಯಕ್ತಿ ಬೆಂಕಿ ಹಚ್ಚಿದ್ದಾನೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇಂದು ಕೋರ್ಟ್ಗೆ ಹಾಜರು ಪಡಿಸಲಿರುವ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.