ಹೈದರಾಬಾದ್ (ತೆಲಂಗಾಣ): ರಾಜ್ಯದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನೆಲೆ ನಿನ್ನೆ ಸರ್ಕಾರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ಈ. ರಾಜೇಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಯಾವುದೇ ಕರೋನ ವೈರಸ್ ಪಾಸಿಟೀವ್ ಪ್ರಕರಣಗಳಿಲ್ಲ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಈ ವ್ಯಕ್ತಿಯಲ್ಲಿ ಕೊರೊನಾ ಪತ್ತೆಯಾಗಿತ್ತು. ಅಂದಿನಿಂದ ಅವರು ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳು ದುಬೈನಲ್ಲಿದ್ದಾಗ ಈ ವ್ಯಕ್ತಿಯು ವೈರಸ್ ಸೋಂಕಿಗೆ ಒಳಗಾಗಿದ್ದಾರು ಎಂದು ಶಂಕಿಸಲಾಗಿತ್ತು. ದುಬೈನಿಂದ ಅವರು ಬೆಂಗಳೂರಿಗೆ ಮರಳಿದರು. ಅಲ್ಲಿಂದ ಅವರು ಪುನಃ ಬಸ್ನಲ್ಲಿ ಹೈದರಾಬಾದ್ಗೆ ಬಂದಿದ್ದರು. ಜ್ವರ ಮತ್ತು ವೈರಸ್‌ಗೆ ಸಂಬಂಧಿಸಿದ ಇತರ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂಪೂರ್ಣವಾಗಿ ಗುಣಮುಖರಾದ ಹಿನ್ನೆಲೆ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸರ್ಕಾರಿ ಗಾಂಧಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಮಧ್ಯೆ ಕರೋನಾ ವೈರಸ್ ಪರೀಕ್ಷಿಸಿದ 34 ಜನರ ಮಾದರಿಗಳ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ರಾಷ್ಟ್ರೀಯ ಮಾರ್ಗಸೂಚಿಗಳ ನಿರ್ದೇಶನದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ತಡೆಯಲು ಸಾಮೂಹಿಕ ಕೂಟಗಳನ್ನು ತಪ್ಪಿಸಲು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಸಲಹೆಯನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣ ರಾಜ್ಯಪಾಲ ತಮಿಳುಸಾಯಿ ಸೌಂಡರಾಜನ್ ಅವರ ಎಲ್ಲಾ ಸಭೆಗಳನ್ನು ಮುಂದೂಡಲಾಗಿದೆ ಎಂದು ರಾಜ್ ಭವನ ಪತ್ರಿಕಾ ಪ್ರಕಟಣೆ ತಿಳಿಸಿದೆ.