ಲಖನೌ :ತಮ್ಮ ವ್ಯಕ್ತಿಯನ್ನು ಜೈಲಿನಿಂದ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ನಿಮ್ಮನ್ನು ಕೊಲ್ಲುವುದಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಇಂದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಇತಾಹ್ ನಿವಾಸಿ ಅಮರ್‌ಪಾಲ್ ಬಂಧಿತ ಆರೋಪಿ. ಸೆ. 23 ರಂದು ಬಂಧಿತನಾದ ಅಮರ್‌ಪಾಲ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶಗಳನ್ನು ಕಳಿಸಿದ್ದಾನೆ. ಈ ಆರೋಪದ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಕಳಿದ ಅಮರ್‌ಪಾಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.
ಬಂಧನಕ್ಕೊಳಗಾಗಿರುವ ಮುಖ್ತಾರ್ ಅನ್ಸಾರಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ನಿಮ್ಮನ್ನು ಕೊಲೆ ಮಾಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕಳಿಸಿದ್ದಾನೆ. ಈ ಜೀವ ಬೆದರಿಕೆ ಸಂದೇಶಗಳು ಪೊಲೀಸರ ತುರ್ತು ವಾಟ್ಸ್ಆ್ಯಪ್ ಸಂಖ್ಯೆ 112ಗೆ ಬಂದಿವೆ ಎಂದು ಲಖನೌ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.