ಮಂಗಳೂರು: ಮಹಾನಗರ ಪಾಲಿಕೆಯ ಚುನಾವಣೆಯ ಸೀಟು ಹಂಚಿಕೆ ವಿಚಾರದಲ್ಲಿ ಕೆಲವು ಗೊಂದಲಗಳಿದ್ದು ಕೆಪಿಸಿಸಿ ಅಧ್ಯಕ್ಷರಲ್ಲಿ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು.
ಇಂಟೆಕ್ ಸಂಘಟನೆ ದೇಶಾದ್ಯಂತ 3.42 ಕೋಟಿ ಸದಸ್ಯರನ್ನು ಹೊಂದಿದೆ. ಕೇಂದ್ರ ಸರ್ಕಾರ ಇಂಟಕ್‌ನಲ್ಲಿ ಇಷ್ಟು ಸದಸ್ಯರಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಇಂಟಕ್ ರಾಷ್ಟ್ರೀಯ ಉಪಾಧ್ಯಕ್ಷ್ಯ ಸಂಜೀವ ರೆಡ್ಡಿ, ನ್ಯಾಯಾಲಯದ ಆದೇಶದ ಮೂಲಕ ಪರಿಶೀಲನೆಗೆ ಅರ್ಜಿ ಹಾಕಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಇಂಟೆಕ್ ಸಂಸ್ಥೆಯಲ್ಲಿ 3.42 ಕೋಟಿ ಸದಸ್ಯತ್ವ ಹೊಂದಿದೆ ಎಂದು ದೃಢಪಡಿಸಿತ್ತು.
ಈ ನಿಟ್ಟಿನಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ಹೊಂದಿರುವ ಇಂಟೆಕ್, ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದೆ. ಚುನಾವಣೆಯಲ್ಲಿ ನಮ್ಮ ಎಲ್ಲಾ ಕಾರ್ಮಿಕರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದ್ದೇವೆ ಎಂದು ರಾಕೇಶ್ ಮಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು.