ಚಂಡೀಗಡ/ನವದೆಹಲಿ: ನಾಳೆ ಹರಿಯಾಣ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಪ್ರಮಾನವಚನ ಸ್ವೀಕರಿಸಲಿದ್ದು, ಉಪಮುಖ್ಯಮಂತ್ರಿಯಾಗಿ ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲ ಅಧಿಕಾರ ಸ್ವೀಕರಿಸಲಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಖಟ್ಟರ್ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯರನ್ನು ಭೇಟಿಯಾದರು. ಈ ವೇಳೆ ಸರ್ಕಾರ ರಚನೆಗೆ ಅವಕಾಶ ಕೋರಿ ಹಕ್ಕು ಮಂಡನೆ ಮಾಡಿದ ಖಟ್ಟರ್ಗೆ, ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಖಟ್ಟರ್ 2.0 ಸಕಾ್ರ ನಡೆಸಲು ಸಜ್ಜಾಗಿದ್ದಾರೆ.
-
ML Khattar: We have stake claim to form govt in Haryana. Governor has accepted our proposal & invited us. I have tendered my resignation which has been accepted. Tomorrow at 2:15 PM oath taking ceremony will be held at Raj Bhavan. Dushyant Chautala will take oath as Deputy CM. pic.twitter.com/gukF9WWFbk
— ANI (@ANI) October 26, 2019 " class="align-text-top noRightClick twitterSection" data="
">ML Khattar: We have stake claim to form govt in Haryana. Governor has accepted our proposal & invited us. I have tendered my resignation which has been accepted. Tomorrow at 2:15 PM oath taking ceremony will be held at Raj Bhavan. Dushyant Chautala will take oath as Deputy CM. pic.twitter.com/gukF9WWFbk
— ANI (@ANI) October 26, 2019ML Khattar: We have stake claim to form govt in Haryana. Governor has accepted our proposal & invited us. I have tendered my resignation which has been accepted. Tomorrow at 2:15 PM oath taking ceremony will be held at Raj Bhavan. Dushyant Chautala will take oath as Deputy CM. pic.twitter.com/gukF9WWFbk
— ANI (@ANI) October 26, 2019
90 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತ ಪಕ್ಷ ಬಿಜೆಪಿ 40 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿತ್ತು. ಕಾಂಗ್ರೆಸ್ 31 ಕ್ಷೇತ್ರ, ದುಷ್ಯಂತ್ ಚೌಟಾಲ ನೇತೃತ್ವದ ಜೆಜೆಪಿ ಪಕ್ಷ 10 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿತ್ತು. ಆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಚೌಟಾಲ, ತಮ್ಮ ಅಜೆಂಡಾ ಬೆಂಬಲಿಸುವವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. ಹೀಗಾಗಿ ಸರ್ಕಾರ ರಚನೆಗೆ 46 ಸಂಖ್ಯಾಬಲ ಬೇಕಿದ್ದ ಹರಿಯಾಣದಲ್ಲಿ ಬಿಜೆಪಿ ಹಾಗೂ ಜೆಜೆಪಿ ಮೈತ್ರಿಯೊಂದಿಗೆ 50 ಸ್ಥಾನಗಳು ದೊರಕಿದೆ.ಹೀಗಾಗಿ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತಿದೆ.