ETV Bharat / bharat

ನಾಳೆಯೇ ಮನೋಹರ್​ಲಾಲ್​ ಖಟ್ಟರ್ ಪ್ರಮಾಣ ವಚನ ಸ್ವೀಕಾರ...! - ಗೃಹ ಸಚಿವ ಅಮಿತ್​ ಶಾ

ರಾಜ್ಯದಲ್ಲಿ ಸರ್ಕಾರ ರಚಿಸುವ ಕುರಿತು ಸಿಎಂ ಮನೋಹರ್ ಲಾಲ್​ ಖಟ್ಟರ್​ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

manohar-lal-will-swear-in-as-cm-tomorrow
author img

By

Published : Oct 24, 2019, 11:06 PM IST

ಹರಿಯಾಣ: ಈ ಬಾರಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಹರಿಯಾಣದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಏತನ್ಮಧ್ಯೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯಿಂದ ಮುಖ್ಯಮಂತ್ರಿ ಮನೋಹರ್ ಲಾಲ್ ಅವರು ನಾಳೆಯೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಪ್ರಕಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯಿಂದ ಬಂಡಾಯ ಎದ್ದು ಸ್ವತಂತ್ರರಾಗಿ ಸ್ವರ್ಧಿಸಿ ಗೆಲುವಿನ ನಗೆ ಬೀರಿರುವ ಐವರು ಶಾಸಕರನ್ನು ಬಿಜೆಪಿಗೆ ಬೆಂಬಲ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದಾರೆ ಎನ್ನಲಾಗ್ತಿದೆ. ಮನೋಹರ್ ಲಾಲ್ ಖಟ್ಟರ್ ಅವರನ್ನು ಶುಕ್ರವಾರ ಬಿಜೆಪಿ ವಿಧಾನಸಭಾ ಸಭೆಯ ನಾಯಕರಾಗಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.

ಇಲ್ಲಿ ಏಕಾಂಗಿಯಾಗಿ ಸರ್ಕಾರ ರಚಿಸಲು ಬೇಕಾದ ಸಂಖ್ಯೆ 46. ಆದರೆ ಯಾವೊಂದು ಪಕ್ಷವೂ ಸಂಪೂರ್ಣ ಬಹುಮತ ಪಡೆಯದ ಕಾರಣ ಬಿಜೆಪಿಯು ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚಿಸಲು ಸಿದ್ದಗೊಂಡಿದೆ. ಕಳೆದ ಬಾರಿ 47 ಸ್ಥಾನಗಳಲ್ಲಿ ಗೆದ್ದು ಏಕಾಂಗಿಯಾಗಿ ಸರ್ಕಾರ ರಚಿಸಿದ್ದ ಬಿಜೆಪಿ, ಈ ಬಾರಿ 40 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ. ಆದ್ದರಿಂದಾಗಿ ಪಕ್ಷೇತರರನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಿದೆ.

ಕಾಂಗ್ರೆಸ್​ ಕಳೆದ ಬಾರಿ ಕೇವಲ 15 ಕ್ಷೇತ್ರಗಳಲ್ಲಿ ಗೆದ್ದಿತ್ತು. ಈಗ ಕೇಂದ್ರ ಸರ್ಕಾರ ವೈಫಲ್ಯಗಳನ್ನೇ ಅಸ್ತ್ರವಾಗಿಸಿಕೊಂಡು ಚುನಾವಣೆ ಎದುರಿಸಿ 31 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಮೂಲಕ ಉತ್ತಮ ಬೆಳವಣಿಗೆ ಸಾಧಿಸಿದೆ. ಇನ್ನು ಜನನಾಯಕ್ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರವಾಗಿ 8 ಮಂದಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್​ ಕೂಡ ಸರ್ಕಾರ ರಚಿಸಲು ಅವಕಾಶ ಇದೆ. ಆದರೆ, ಪಕ್ಷೇತರರು, ಜೆಜೆಪಿ ಶಾಸಕನ್ನು ಸೇರಿಸಿಕೊಳ್ಳಬೇಕು. ಜೊತೆಗೆ ಪಕ್ಷೇತರರನ್ನು ಸೇರಿಸಿಕೊಳ್ಳಬೇಕು. ಪಕ್ಷೇತರರು ಬಿಜೆಪಿಗೆ ಬೆಂಬಲ ಸೂಚಿಸುವ ಮುಂದಾಗಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕಾಂಗ್ರೆಸ್​ಗೆ​ ಏನೂ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಖಟ್ಟರ್​ ಅವರು ಸರ್ಕಾರ ರಚಿಸಲು ರಾಜ್ಯಪಾಲರ ಒಪ್ಪಿಗೆ ಕೇಳಿದ್ದಾರೆ ಎನ್ನಲಾಗಿದೆ.

Intro:Body:

Manohar Lal Khattar

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.