ETV Bharat / bharat

ಜಮ್ಮು- ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ - ಗಿರೀಶ್ ಚಂದ್ರ ಮುರ್ಮು ರಾಜೀನಾಮೆ

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ ಸಲ್ಲಿಸಿದ ಹಿನ್ನೆಲೆ, ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

manoj sinha
manoj sinha
author img

By

Published : Aug 6, 2020, 8:31 AM IST

ಶ್ರೀನಗರ (ಜಮ್ಮು ಕಾಶ್ಮೀರ): ಬಿಜೆಪಿ ಮುಖಂಡ ಮತ್ತು ಮಾಜಿ ರೈಲ್ವೆ ರಾಜ್ಯ ಸಚಿವ ಮನೋಜ್ ಸಿನ್ಹಾ ಅವರನ್ನು ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

ಹಿಂದಿನ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಸ್ವೀಕರಿಸಿದ್ದಾರೆ.

"ಮನೋಜ್ ಸಿನ್ಹಾ ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಲಿದ್ದಾರೆ" ಎಂದು ರಾಷ್ಟ್ರಪತಿ ಭವನ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಜಿ ಸಿ ಮುರ್ಮು ಬುಧವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಹಠಾತ್​​ ರಾಜೀನಾಮೆ ನೀಡಿದ್ದನ್ನು ಅಧಿಕಾರಿಗಳು ಖಚಿತ ಪಡಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ನಡೆದ ಮೊದಲ ವಾರ್ಷಿಕೋತ್ಸವದಂದೇ ಜಿ ಸಿ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡ ಸಮಯದಲ್ಲಿ ಅವರು ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದರು. ಮುರ್ಮು ಅವರಿಗೆ ಕೇಂದ್ರದಲ್ಲಿ ಹೊಸ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.