ETV Bharat / bharat

ಜಮ್ಮು- ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ಪ್ರಮಾಣವಚನ ಸ್ವೀಕಾರ - ಜಮ್ಮು ಮತ್ತು ಕಾಶ್ಮೀರ

ಮೊದಲ ಬಾರಿಗೆ ರಾಜಕೀಯ ನಾಯಕರೊಬ್ಬರು ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

LG of Jammu and Kashmir
ಮನೋಜ್ ಸಿನ್ಹಾ
author img

By

Published : Aug 7, 2020, 4:03 PM IST

ಶ್ರೀನಗರ: ಕೇಂದ್ರ ಮಾಜಿ ಸಚಿವ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಮನೋಜ್ ಸಿನ್ಹಾ ಕೇಂದ್ರಾಡಳಿತ ಪ್ರದೇಶದ ಉಸ್ತುವಾರಿ ವಹಿಸಿಕೊಂಡ ಮೊದಲ 'ರಾಜಕೀಯ ನಾಯಕ'ರಾಗಿದ್ದಾರೆ.

ಜಮ್ಮು- ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ಪ್ರಮಾಣವಚನ ಸ್ವೀಕಾರ

ರಾಜಭವನದಲ್ಲಿ ಸರಳವಾಗಿ ನಡೆದ ಸಮಾರಂಭದಲ್ಲಿ ಮನೋಜ್ ಸಿನ್ಹಾರಿಗೆ ಜಮ್ಮು- ಕಾಶ್ಮೀರದ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾಜೀರ್ ಅಹ್ಮದ್ ಲಾವೆ, ಬಿಜೆಪಿ ಲೋಕಸಭಾ ಸದಸ್ಯ ಜುಗಲ್ ಕಿಶೋರ್ ಶರ್ಮಾ, ಈ ಹಿಂದಿನ ಲೆಫ್ಟಿನೆಂಟ್ ಗವರ್ನರ್‌ಗಳ ಸಲಹೆಗಾರರು, ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಉಪಸ್ಥಿತರಿದ್ದರು.

ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬುಧವಾರ ರಾತ್ರಿ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ ಸಲ್ಲಿಸಿದ ಹಿನ್ನೆಲೆ ಗುರುರಾರ ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.