ಬರೌಲಿ(ಬಿಹಾರ): ಮಾರ್ಬಲ್ ತುಂಬಿದ್ದ ಟ್ರಕ್ ಪಲ್ಟಿಯಾಗಿ ರಸ್ತೆ ಬದಿ ಆಟವಾಡುತ್ತಿದ್ದ 6 ಬಾಲಕಿಯರು ಸಾವನ್ನಪ್ಪಿರುವ ಘಟನೆ ಬಾರೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರೇಯಾ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ರಸ್ತೆಯಲ್ಲಿ ತಿರುವು ತೆಗೆದುಕೊಳ್ಳುವಾಗ ಸಮತೋಲನ ಕಳೆದುಕೊಂಡ ಪರಿಣಾಮ ಟ್ರಕ್ ಪಲ್ಟಿಯಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದ ಮಕ್ಕಳ ಮೇಲೆ ಮಾರ್ಬಲ್ಗಳು ಬಿದ್ದಿವೆ. ಪರಿಣಾಮ ಸ್ಥಳದಲ್ಲೇ ಬಾಲಕಿಯರು ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಗೋಪಾಲ್ಗಂಜ್ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಮೃತ ಬಾಲಕಿಯರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ತಿಳಿದ ತಕ್ಷಣ ಮೃತ ಬಾಲಕಿಯರ ಕುಟುಂಬಸ್ಥರ ರೋಧನೆ ಮುಗಿಲುಮುಟ್ಟಿದೆ. ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ.