ರಾಜಸ್ಥಾನ: 15 ವರ್ಷದ ಬಾಲಕಿಯನ್ನು ಆಕೆಯ ಪತಿ ಸೇರಿದಂತೆ ನಾಲ್ವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಬುಂಡಿಯಲ್ಲಿ ನಡೆದಿದೆ.
ನವೆಂಬರ್ 27 ರಂದು ಬಾಲಕಿ ತನ್ನ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ವೇಳೆ ವ್ಯಾನ್ನಲ್ಲಿ ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಆಕೆಯನ್ನ ಅಪಹರಿಸಿದ್ದಾರೆ. ಅಪಹರಣಕಾರರಲ್ಲಿ ಒಬ್ಬ ಆಕೆಯ ಪತಿ ಎಂದು ಹೇಳಲಾಗಿದೆ. ಆಕೆ ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗಿದ್ದಳು ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸತ್ನಾಮ್ ಸಿಂಗ್ ತಿಳಿಸಿದ್ದಾರೆ.
ತಮ್ಮ ಮಗಳು ಸ್ನೇಹಿತರೊಂದಿಗೆ ಶಾಲೆಗೆ ಹೋಗುವಾಗ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ, ಅಲ್ಲದೇ ಆಕೆಯೊಂದಿಗಿದ್ದ ಸ್ನೇಹಿತೆಯರನ್ನೂ ಅಪಹರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ತಂದೆ ಬಾಬು ಲಾಲ್ ಗುಜ್ಜರ್, ಹಿಂದೋಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಂತ್ರಸ್ತೆ, ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ಬಾಲಿಕಾ ಗ್ರಹದಲ್ಲಿ ಇರಿಸಲಾಗಿದ್ದು, ಆಕೆಯ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.