ಕಂಕೆರ್(ಛತ್ತೀಸಘಡ್): ಚೀನಾ-ಭಾರತ ಸಂಘರ್ಷದ ವೇಳೆ ಹುತಾತ್ಮರಾಗಿರುವ ಜವಾನ್ ಗಣೇಶ್ ಕುಂಜಮ್ ಅವರ ಅಂತ್ಯಕ್ರಿಯೆ ಇಂದು ನಡೆಸಲಾಗಿದ್ದು, ಇದರಲ್ಲಿ ಭಾಗಿಯಾಗಿದ್ದ ವೀರ ಯೋಧನ ಸಹೋದರಿಗೆ ಕೊರೊನಾ ಪಾಸಿಟಿವ್ ಇರುವುದು ಕನ್ಫರ್ಮ್ ಆಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ವಾಸವಾಗಿದ್ದ ಇವರು ವೀರ ಯೋಧನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವುದಕ್ಕಾಗಿ ಇಂದು ಬೆಳಗ್ಗೆ ಆಗಮಿಸಿದ್ದರು. ಈ ವೇಳೆ ಅವರ ಗಂಟಲು ದ್ರವ ಕೊರೊನಾ ಪರೀಕ್ಷೆಗಾಗಿ ಪಡೆದುಕೊಳ್ಳಲಾಗಿತ್ತು. ಸದ್ಯ ವರದಿ ಹೊರಬಿದ್ದಿದ್ದು, ಅದು ಪಾಸಿಟಿವ್ ಬಂದಿದೆ ಎಂದು ಹೇಳಲಾಗಿದೆ. ತಕ್ಷಣವೇ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ
ಜವಾನ್ ಗಣೇಶ್ ಕುಂಜಮ್ ಅವರ ಅಂತ್ಯಕ್ರಿಯೆಯಲ್ಲಿ ಅವರು ಭಾಗಿಯಾಗಿದ್ದು, ಈ ವೇಳೆ ಅನೇಕರು ಸ್ಥಳದಲ್ಲಿ ಉಪಸ್ಥಿತರಿದ್ದರು. ಇದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಸೇನಾಧಿಕಾರಿಗಳು ಸೇರಿದಂತೆ ರಾಜಕೀಯ ವ್ಯಕ್ತಿಗಳು ಭಾಗಿಯಾಗಿದ್ದ ಕಾರಣ ಆತಂಕ ಉದ್ಭವವಾಗಿದೆ. ಇನ್ನು ಗ್ರಾಮವನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ.