ETV Bharat / bharat

ಮುಂಬೈನ ಮಾಲ್‌ನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ಕಾರ್ಯ ಚುರುಕು - ಮುಂಬೈ ಸೆಂಟ್ರಲ್‌ನ ಸಿಟಿ ಸೆಂಟರ್ ಮಾಲ್​ನಲ್ಲಿ ಬೆಂಕಿ

ನಿನ್ನೆ ತಡರಾತ್ರಿ ಮುಂಬೈನ ಸಿಟಿ ಸೆಂಟರ್ ಮಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ.

Massive fire breaks out in Mumbai mall, no casualty
ಮುಂಬೈನ ಮಾಲ್‌ನಲ್ಲಿ ಅಗ್ನಿ ಅವಘಡ
author img

By

Published : Oct 23, 2020, 7:54 AM IST

Updated : Oct 23, 2020, 8:56 AM IST

ಮುಂಬೈ (ಮಹಾರಾಷ್ಟ್ರ): ಮುಂಬೈನ ಮಾಲ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಸೆಂಟ್ರಲ್‌ನ ಸಿಟಿ ಸೆಂಟರ್ ಮಾಲ್‌ನಲ್ಲಿ ರಾತ್ರಿ 8.53ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ನಾಗಪಾಡಾ ಪ್ರದೇಶದ ಮಾಲ್​ನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ.

ಮುಂಬೈನ ಮಾಲ್‌ನಲ್ಲಿ ಅಗ್ನಿ ಅವಘಡ

ಅಗ್ನಿಶಾಮಕ ದಳ ಮತ್ತು ಇತರ ಸಿಬ್ಬಂದಿ ಸೇರಿದಂತೆ ಒಟ್ಟು 250 ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬೆಂಕಿಯನ್ನು ನಂದಿಸಲು 24 ಅಗ್ನಿಶಾಮಕ ವಾಹನಗಳು ಮತ್ತು ಬಹು ಜಂಬೋ ಟ್ಯಾಂಕ್‌ಗಳು ಸೇರಿದಂತೆ 50 ವಾಹನಗಳನ್ನು ನಿಯೋಜಿಸಲಾಗಿದೆ.

ಸ್ಥಳೀಯರ ಪ್ರಕಾರ, ಮಾಲ್‌ನಲ್ಲಿ ಮೊಬೈಲ್ ಫೋನ್ ಪರಿಕರಗಳನ್ನು ಮಾರಾಟ ಮಾಡುವ ಅಂಗಡಿಗಳಿವೆ. ಮಾಲ್ ಪಕ್ಕದಲ್ಲಿರುವ 55 ಅಂತಸ್ತಿನ ಕಟ್ಟಡದ ಜನರನ್ನು ಸಹ ಸ್ಥಳಾಂತರಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಆಡಳಿತ ತಿಳಿಸಿದೆ.

Last Updated : Oct 23, 2020, 8:56 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.