ಲಕ್ನೋ/ಉತ್ತರ ಪ್ರದೇಶ: ಗೊಂಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೆಲವು ದುಷ್ಕರ್ಮಿಗಳು ದೇವಾಲಯದ ಅರ್ಚಕರೊಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆಯನ್ನು ಬಿಎಸ್ಪಿ ನಾಯಕಿ ಮಾಯಾವತಿ ಖಂಡಿಸಿದ್ದಾರೆ.
-
2. यूपी की सरकार इस मामले में सभी पहलुओं का गम्भीरता से संज्ञान लेकर दोषियों के विरूद्ध सख्त कानूनी कार्रवाई करे तथा इस घटना से जुडे़ सभी भू-माफियाओं की सम्पत्ति भी जरूर जब्त की जाये। साथ ही, साधु-सन्तों की सुरक्षा भी बढ़ाई जाये। 2/2
— Mayawati (@Mayawati) October 12, 2020 " class="align-text-top noRightClick twitterSection" data="
">2. यूपी की सरकार इस मामले में सभी पहलुओं का गम्भीरता से संज्ञान लेकर दोषियों के विरूद्ध सख्त कानूनी कार्रवाई करे तथा इस घटना से जुडे़ सभी भू-माफियाओं की सम्पत्ति भी जरूर जब्त की जाये। साथ ही, साधु-सन्तों की सुरक्षा भी बढ़ाई जाये। 2/2
— Mayawati (@Mayawati) October 12, 20202. यूपी की सरकार इस मामले में सभी पहलुओं का गम्भीरता से संज्ञान लेकर दोषियों के विरूद्ध सख्त कानूनी कार्रवाई करे तथा इस घटना से जुडे़ सभी भू-माफियाओं की सम्पत्ति भी जरूर जब्त की जाये। साथ ही, साधु-सन्तों की सुरक्षा भी बढ़ाई जाये। 2/2
— Mayawati (@Mayawati) October 12, 2020
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ರಾಜಸ್ಥಾನದಂತೆ ದೇವಾಲಯದ ಭೂಮಿಯನ್ನು ಆಕ್ರಮಿಸಿಕೊಳ್ಳುವ ಉದ್ದೇಶದಿಂದ ಅರ್ಚಕರ ಮೇಲೆ ಮಾರಣಾಂತಿಕ ದಾಳಿ ನಡೆದಿರುವುದು ಬಹಳ ನಾಚಿಕೆಗೇಡಿನ ಸಂಗತಿ. ಸಂತನ ಸರ್ಕಾರವಿರುವ ನಾಡಿನಲ್ಲಿ ಸಂತರಿಗೆ ರಕ್ಷಣೆಯಿಲ್ಲ. ಇದಕ್ಕಿಂತ ಕೆಟ್ಟ ಕಾನೂನು ಸುವ್ಯವಸ್ಥೆ ಇರಲು ಸಾಧ್ಯವೇ? ಎಂದು ಪರೋಕ್ಷವಾಗಿ ಸಿಎಂ ಯೋಗಿ ಆದಿತ್ಯನಾಥ್ಗೆ ಟಾಂಗ್ ನೀಡಿದ್ದಾರೆ.
ಪ್ರಕರಣದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಘಟನೆಗೆ ಸಂಬಂಧಿಸಿದ ಎಲ್ಲಾ ಭೂ ಮಾಫಿಯಾಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅವರು ಯುಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಏನಿದು ಘಟನೆ?
ಸುಮಾರು 30 ಎಕರೆ ಪ್ರದೇಶದಲ್ಲಿರುವ ರಾಮ್ ಜಾನಕಿ ದೇವಾಲಯದ ಪೂಜಾರಿ ಮತ್ತು ತಿರ್ರೆ ಮನೋರಮಾ ಗ್ರಾಮದ ಕೆಲವು ಜನರ ನಡುವೆ ಜಮೀನು ವಿವಾದ ನಡೆದು ಅತುಲ್ ಬಾಬಾ ಅಲಿಯಾಸ್ ಸಾಮ್ರಾತ್ ದಾಸ್ ಎಡ ಭುಜಕ್ಕೆ ಕೆಲವು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಗೊಂಡಾ ಎಸ್ಪಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.
ಗಾಯಗೊಂಡ ಅರ್ಚಕ ದಾಸ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ನಂತರ ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿವಿಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.