ETV Bharat / bharat

ರಾಜ'ಸ್ಥಾನ' ಬಿಕ್ಕಟ್ಟು : ರಾಷ್ಟ್ರಪತಿ ಆಳ್ವಿಕೆಗೆ ಮಾಯಾವತಿ ಆಗ್ರಹ.. - ರಾಜಸ್ಥಾನ ಬಿಕ್ಕಟ್ಟು

ರಾಜಕೀಯ ಬಿಕ್ಕಟ್ಟನ್ನು ಎದುರಿಸುತ್ತಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.

Rajasthan seeks Presidents rule
ರಾಷ್ಟ್ರಪತಿ ಆಳ್ವಿಕೆಗೆ ಮಾಯಾವತಿ ಆಗ್ರಹ
author img

By

Published : Jul 18, 2020, 4:03 PM IST

ಲಖನೌ : ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ಒತ್ತಾಯಿಸಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಅವರು, ಇದು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್‌ಗೆ ಸೇರುವಂತೆ ಮಾಡಿ ದ್ರೋಹ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ’ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

  • 2. इस प्रकार, राजस्थान में लगातार जारी राजनीतिक गतिरोध, आपसी उठा-पठक व सरकारी अस्थिरता के हालात का वहाँ के राज्यपाल को प्रभावी संज्ञान लेकर वहाँ राज्य में राष्ट्रपति शासन लगाने की सिफारिश करनी चाहिए, ताकि राज्य में लोकतंत्र की और ज्यादा दुर्दशा न हो। 2/2

    — Mayawati (@Mayawati) July 18, 2020 " class="align-text-top noRightClick twitterSection" data=" ">

ರಾಜಸ್ಥಾನದಲ್ಲಿ ಮುಂದುವರೆದಿರುವ ರಾಜಕೀಯ ಗೊಂದಲ ಮತ್ತು ಅಸ್ಥಿರತೆಗಳ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಪಡೆದು, ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಿ ಪ್ರಜಾಪ್ರಭುತ್ವ ಉಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು (ಎಸ್‌ಒಜಿ) ಶುಕ್ರವಾರ ಎರಡು ಮೊದಲ ಮಾಹಿತಿ ವರದಿಗಳನ್ನು ದಾಖಲಿಸಿದೆ. ಪಕ್ಷದ ಮುಖ್ಯ ವಿಪ್ ಮಹೇಶ್ ಜೋಶಿ ಅವರು ಮೂರು ಆಡಿಯೊ ಟೇಪ್‌ಗಳನ್ನು ಉಲ್ಲೇಖಿಸಿ ದೂರು ದಾಖಲಿಸಿದ ನಂತರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.