ಪತೇಪುರ್(ಉತ್ತರಪ್ರದೇಶ): ಮಾನಸಿಕ ಅಸ್ವಸ್ಥೆ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರಪ್ರದೇಶದ ಪತೇಪುರ್ದಲ್ಲಿ ನಡೆದಿದ್ದು, ಆರೋಪಿ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಸೋಮವಾರ ಈ ಘಟನೆ ನಡೆದಿದ್ದು, 14 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯವೆಸಗಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಅಳಲು ಶುರು ಮಾಡಿದ್ದರಿಂದ ಪಕ್ಕದ ಮನೆಯವರು ಬಂದು ಆಕೆಯ ರಕ್ಷಣೆ ಮಾಡಿದ್ದಾರೆ.
ಮದುವೆ ಸಮಾರಂಭದಲ್ಲಿ ಭಾಗಿಯಾಗಲು ತೆರಳಿದ್ದ ಯುವಕ, ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ವೆಸಗಲು ಮುಂದಾಗಿದ್ದಾನೆ. ಈಗಾಗಲೇ ಯುವಕನ ವಿರುದ್ಧ ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.