ನಾಂದೇಡ್(ಮಹಾರಾಷ್ಟ್ರ): ಸ್ಕೂಟರ್ ಮೇಲೆ ಕಾಲೇಜ್ಗೆ ತೆರಳುತ್ತಿದ್ದ ವೇಳೆ ರಸ್ತೆ ಮೇಲೆ ಜಾರಿ ಬಿದ್ದಿರುವ ಪರಿಣಾಮ ವಿದ್ಯಾರ್ಥಿನಿವೋರ್ವಳ ಮೇಲೆ ಟ್ರಕ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಾರಾಷ್ಟ್ರದ ನಾಂದೇಡ್ನ ಮಾಲೆಗಾಂವ್ ರೋಡ್ನಲ್ಲಿ ಬಿಸಿಎ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ಸ್ಕೂಟರ್ ಮೇಲೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಜಾರಿ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟ್ರಕ್ ನಿಕಿತಾ ಜಾಧವ್(21) ಮೇಲೆ ಹರಿದು ಹೋಗಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಿಕಿತಾ ಎರಡನೇ ವರ್ಷದ ಬಿಸಿಎ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ಇನ್ನು ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆಯಲ್ಲಿ ಕೆಲವೊಂದು ಕಾಮಗಾರಿ ಬಾಕಿ ಉಳಿದ ಪರಿಣಾಮ ಸ್ಕೂಟರ್ ಜಾರಿ ಕೆಳಗೆ ಬಿದ್ದಿರುವ ಪರಿಣಾಮ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜತೆಗೆ ಕಾಮಗಾರಿ ನಡೆಯುತ್ತಿದ್ದ ಬಗ್ಗೆ ಯಾವುದೇ ಫಲಕವನ್ನು ಅಳವಡಿಕೆ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.