ETV Bharat / bharat

ಅಗತ್ಯವಸ್ತುಗಳ ಕೊರತೆಯ ವದಂತಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ - ಎಂಹೆಚ್​ಎ

ಲಾಕ್​ಡೌನ್​ ಕುರಿತಂತೆ ಕೆಲವು ವದಂತಿಗಳು ಹರಡುತ್ತಿವೆ. ಅಗತ್ಯ ವಸ್ತುಗಳ ಕೊರತೆ ಇರುವುದಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಕೇಂದ್ರದ ಗೃಹ ಇಲಾಖೆ ರಾಜ್ಯಗಳಿಗೆ ಸಲಹೆ ನೀಡಿದೆ.

ministry of home affairs
ಕೇಂದ್ರ ಗೃಹ ಇಲಾಖೆ
author img

By

Published : Mar 25, 2020, 11:27 AM IST

ನವದೆಹಲಿ: ಅಗತ್ಯವಸ್ತುಗಳ ಕೊರತೆಯಿದೆ ಎಂದು ವದಂತಿ ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಡಿಜಿಪಿಗಳೊಂದಿಗೆ ನಡೆದ ಸಭೆಯಲ್ಲಿ ಕೇಂದ್ರ ಗೃಹ ಇಲಾಖೆ ಈ ಸೂಚನೆ ನೀಡಿದೆ. ಈ ರೀತಿಯಾಗಿ ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಜೊತೆಗೆ ಆಹಾರ, ವೈದ್ಯಕೀಯ ಹಾಗೂ ಅಗತ್ಯ ಸೇವೆಗಳ ಕೊರತೆ ದೇಶದಲ್ಲಿ ಇಲ್ಲವೆಂದು ಸಾರ್ವಜನಿಕರಿಗೆ ಮನದಟ್ಟು ಮಾಡಬೇಕಿದೆ ಎಂದು ಈ ವೇಳೆ ಅಭಿಪ್ರಾಯಪಟ್ಟಿದೆ.

ವಿಪತ್ತು ನಿರ್ವಹಣಾ ಕಾಯ್ದೆ-2005 (ಲಾಕ್​ಡೌನ್​) ಪ್ರಕಾರ ಅಗತ್ಯ ವಸ್ತುಗಳು ಹಾಗೂ ಸರಕುಗಳ ಬಗ್ಗೆ ಅನಗತ್ಯ ಹಾಗೂ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದಾಗಿದೆ. ಆದ್ದರಿಂದ ವದಂತಿಗಳನ್ನು ಹರಡಬಾರದು ಎಂದು ಗೃಹ ಇಲಾಖೆ ಮನವಿ ಮಾಡಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಿದೆ. ಸಾರ್ವಜನಿಕರಿಗೆ ಇಂತಹ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ವಸ್ತುಗಳನ್ನು ತಲುಪಿಸಿ ಲಾಕ್​​ಡೌನ್​ ಅನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.