ETV Bharat / bharat

ವಿಶ್ವವಿದ್ಯಾನಿಲಯ-ಶೈಕ್ಷಣಿಕ ಸಂಸ್ಥೆಗಳಿಗೆ ಪರೀಕ್ಷೆ ನಡೆಸಲು ಗ್ರೀನ್​​ ಸಿಗ್ನಲ್​: ಅಂತಿಮ ವರ್ಷದ​ ಪರೀಕ್ಷೆ ಕಡ್ಡಾಯ

ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಬಗ್ಗೆ ಹಲವು ದಿನಗಳಿಂದ ಕಳವಳ ವ್ಯಕ್ತಪಡಿಸಿದ್ದರು. ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ವಿಶ್ವವಿದ್ಯಾನಿಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸಲು ಗೃಹ ಸಚಿವಾಲಯ ಅನುಮತಿಸಿರುವುದಾಗಿ ತಿಳಿಸಿದೆ.

author img

By

Published : Jul 6, 2020, 9:13 PM IST

universities
ವಿಶ್ವವಿದ್ಯಾನಿಲಯ

ನವದೆಹಲಿ: ವಿಶ್ವವಿದ್ಯಾನಿಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯ (ಎಂಹೆಚ್​ಎ) ಸೋಮವಾರ ಅನುಮತಿ ನೀಡಿದೆ.

ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಬಗ್ಗೆ ಹಲವು ದಿನಗಳಿಂದ ಕಳವಳ ವ್ಯಕ್ತಪಡಿಸಿದ್ದರು. ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ವಿಶ್ವವಿದ್ಯಾನಿಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸಲು ಗೃಹ ಸಚಿವಾಲಯ ಅನುಮತಿಸಿರುವುದಾಗಿ ತಿಳಿಸಿದೆ.

  • MHA, in a letter to Union Higher Education Secy, today permitted conduct of exams by universities&institutions. The final Term Exams are to be compulsorily conducted as per UGC Guidelines and as per the Standard Operating Procedure approved by Union Ministry of Health: MHA pic.twitter.com/mTHWTy0GZ3

    — ANI (@ANI) July 6, 2020 " class="align-text-top noRightClick twitterSection" data=" ">

ವಿಶ್ವವಿದ್ಯಾನಿಲಯಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್​ನಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಗಳ ಪ್ರಕಾರ, ಅಂತಿಮ ವರ್ಷದ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದ ಕೇಂದ್ರ ಸಚಿವಾಲಯ ಅನುಮೋದಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಅನುಸರಿಸಿ ಪರೀಕ್ಷೆಗಳನ್ನು ನಡೆಸಬೇಕು ಎಂದಿದೆ.

ಕೊರೊನಾ ವೈರಸ್ ಪ್ರಕರಣಗಳು ಏರಿಕೆ ಆಗುತ್ತಿರುವ ಮಧ್ಯೆಯೂ ದೇಶಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಲು ಅಥವಾ ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದರು. ಕೆಲವು ರಾಜ್ಯಗಳು ಪರೀಕ್ಷೆಗಳನ್ನು ರದ್ದುಗೊಳಿಸಿದ್ದರೆ, ಮತ್ತೆ ಕೆಲ ರಾಜ್ಯಗಳು ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.