ಕೊಟ್ಟಾಯಂ/ಕೇರಳ: ಕೊರೊನಾ ನಿಯಂತ್ರಣಕ್ಕಾಗಿ ಇಡೀ ದೇಶವೇ ಲಾಕ್ಡೌನ್ ಆಗಿರುವ ಹಿನ್ನೆಲೆ ದೇಶಾದ್ಯಂತ ಲಕ್ಷಾಂತರ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿವಿಧ ರಾಜ್ಯಗಳಿಗೆ ತುತ್ತಿನ ಚೀಲ ತುಂಬಿಸಿಕೊಳ್ಳುವ ಸಲುವಾಗಿ ಗುಳೆ ಹೋಗಿದ್ದ ಕಾರ್ಮಿಕರು ಇದೀಗ ವಾಪಸ್ ತಮ್ಮ-ತಮ್ಮ ಊರುಗಳಿಗೆ ಮರಳಲು ವಾಹನಗಳಿಲ್ಲದೇ ಪರದಾಡುತ್ತಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆ ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಯಿಪ್ಪಡ್ನಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಸಾರಿಗೆ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಲಾಕ್ಡೌನ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.