ETV Bharat / bharat

ವಲಸಿಗರನ್ನು 15 ದಿನಗಳೊಳಗೆ ಮನೆಗೆ ಕಳುಹಿಸಲು ರಾಜ್ಯಗಳಿಗೆ ಸುಪ್ರೀಂ ಸೂಚನೆ

author img

By

Published : Jun 9, 2020, 11:41 AM IST

15 ದಿನಗಳೊಳಗೆ ವಲಸೆ ಕಾರ್ಮಿಕರನ್ನು ಮನೆಗಳಿಗೆ ಕಳುಹಿಸಿ, ಅವರಿಗೆ ಉದ್ಯೋಗ ನೀಡುವ ವ್ಯವಸ್ಥೆ ಮಾಡುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ.

Supreme Court
ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯಗಳು ಆದಷ್ಟು ಬೇಗ ವಲಸೆ ಕಾರ್ಮಿಕರನ್ನು ಗುರುತಿಸಿ, 15 ದಿನಗಳಲ್ಲಿ ಅವರನ್ನು ಮನೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕೆಂದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

'ವಲಸಿಗರ ಮೇಲಿನ ಪ್ರಕರಣ ರದ್ದು ಮಾಡಿ'

ಇದರೊಂದಿಗೆ 2005ರ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ವಲಸಿಗರ ವಿರುದ್ಧ ದಾಖಲಾಗಿರುವ ಲಾಕ್​ಡೌನ್​ ನಿಯಮ ಉಲ್ಲಂಘನೆಯಂಥ ಕೇಸ್​ಗಳನ್ನು ರದ್ದು ಮಾಡಬೇಕೆಂದು ನ್ಯಾಯಾಲಯ ಸೂಚಿಸಿದ್ದು, ವಲಸೆ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಅಲ್ಲದೇ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ತೆರಳಲು ಅರ್ಜಿ ಸಲ್ಲಿಸಿದ 24 ಗಂಟೆಯೊಳಗಾಗಿ ಅವರಿಗೆ ಶ್ರಮಿಕ್​ ರೈಲುಗಳ ವ್ಯವಸ್ಥೆ ಮಾಡಬೇಕು. ವಲಸಿಗರು ತಮ್ಮ ರಾಜ್ಯಗಳಿಗೆ ಹಿಂದಿರುಗಿದ ಬಳಿಕ ಅವರಿಗೆ ಉದ್ಯೋಗ ಸೃಷ್ಟಿಸುವ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿಯುಳ್ಳ ಅಫಿಡವಿಟ್‌ ಸಲ್ಲಿಸಬೇಕೆಂದು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಆದೇಶ ನೀಡಿದೆ.

ಈ ಕುರಿತ ವಿಚಾರಣೆಯನ್ನು ಜುಲೈ 8 ರಂದು ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.