ಮುಂಬೈ: ಪ್ರಸಿದ್ದ ಬಾಲಿವುಡ್ ಗಾಯಕ ಮಿಕಾ ಸಿಂಗ್ ಅವರ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
![Mika Singh's Manager Soumya](https://etvbharatimages.akamaized.net/etvbharat/prod-images/6159174_107_6159174_1582305629427.png)
ಬಾಲಿವುಡ್ನ ಜನಪ್ರಿಯ ಗಾಯಕ ಆಗಿರುವ ಮಿಕಾ ಸಿಂಗ್ ಅವರ ವ್ಯವಸ್ಥಾಪಕರಾಗಿ ಸೌಮ್ಯಾ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪಶ್ಚಿಮ ಅಂಧೇರಿಯ ಬಂಗಲೆಯಲ್ಲಿರುವ ಮಿಕಾ ಸಿಂಗ್ ಅವರ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮುಂಬೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿಗೆ ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.
ಘಟನೆ ತನಿಖೆ ನಡೆಸಲಾಗುತ್ತಿದ್ದು, ಲಭ್ಯವಾಗಿರುವ ಮಾಹಿತಿ ಪ್ರಕಾರ ಆಕೆ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ವಾಸವಾಗಿದ್ದಳು. ಅಲ್ಲಿ ಆಕೆಯ ಪೋಷಕರು ಇರಲಿಲ್ಲ ಎಂದು ತಿಳಿದು ಬಂದಿದೆ.