ಶ್ರೀನಗರ: ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಸಿಆರ್‌ಪಿಎಫ್ ಹಿರಿಯ ಅಧಿಕಾರಿಯೊಬ್ಬರು, ಎಸ್‌ಎಂಎಚ್‌ಎಸ್ ಆಸ್ಪತ್ರೆಯ ಬಳಿ ಸಿಆರ್‌ಪಿಎಫ್‌ನ 144ನೇ ಬೆಟಾಲಿಯನ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರೆನೇಡ್ ಎಸೆದ ನಂತರ ಉಗ್ರರು ಆಸ್ಪತ್ರೆ ಪ್ರವೇಶಿಸಿದ್ದು, ಉಗ್ರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಸಿಆರ್‌ಪಿಎಫ್‌ನ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.